ಕೆ.ಆರ್.ನಗರ, 23 ಮೇ (ಹಿ.ಸ.) :
ಆ್ಯಂಕರ್ : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa