ಬೆಂಗಳೂರು, 23 ಮೇ (ಹಿ.ಸ.) :
ಆ್ಯಂಕರ್ : ನಮ್ಮ ಮೆಟ್ರೋ'ದ ನೇರಳೆ ಮಾರ್ಗದಲ್ಲಿನ ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಬೆಳಗ್ಗೆ 5:00 ಗಂಟೆಯಿಂದ ನೇರಳೆ ಮಾರ್ಗದಲ್ಲಿನ ವೈಟ್‌ಫೀಲ್ಡ್ ನಿಲ್ದಾಣದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಹೋಪ್‌ಫಾರ್ಮ್ ಚನ್ನಸಂದ್ರ ನಿಲ್ದಾಣ ಮತ್ತು ಚಲ್ಲಘಟ್ಟ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಕಾರ್ಯನಿರ್ವಹಿಸಲಿವೆ. ಹಸಿರು ಮಾರ್ಗದಲ್ಲಿ ಸಾಮಾನ್ಯ ಸೇವೆಗಳು ಮುಂದುವರೆಯಲಿವೆ ಎಂದು ಬಿಎಂಆರ್‌ಸಿಎಲ್‌ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa