ಕೋವಿಡ್ : ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಲಿ-ಸಿದ್ದರಾಮಯ್ಯ
ಮೈಸೂರು, 23 ಮೇ (ಹಿ.ಸ.) : ಆ್ಯಂಕರ್ : ಸಿಂಗಾಪುರ , ಹಾಂಕಾಂಗ್ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸುವವರ ಕೋವಿಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮಲ್ಲೂ ಕೋವಿಡ್ ಪ್
Cm


ಮೈಸೂರು, 23 ಮೇ (ಹಿ.ಸ.) :

ಆ್ಯಂಕರ್ : ಸಿಂಗಾಪುರ , ಹಾಂಕಾಂಗ್ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸುವವರ ಕೋವಿಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮಲ್ಲೂ ಕೋವಿಡ್ ಪ್ರಕರಣಗಳು ಹೆಚ್ಚುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande