ತೋರಣಗಲ್ಲು, 23 ಮೇ (ಹಿ.ಸ.) :
ಆ್ಯಂಕರ್ : ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ಉಮಾದೇವಿ(36) 2024 ಕಾಣೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲು ಮುಖ ಹೊಂದಿರುತ್ತಾಳೆ. ಬಲಗೈನಲ್ಲಿ ಮುಕ್ಕಣ ಅಂತ ಅಚ್ಚೆ ಹಾಕಿಸಿಕೊಂಡಿರುತ್ತಾರೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಬ್ಲೌಸ್ ಮತ್ತು ಕೆಂಪು ಬಣ್ಣದ ಸೀರೆ ಧರಿಸಿರುತ್ತಾಳೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ.
ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೆÇಲೀಸ್ ಕಂಟ್ರೋಲ್ ರೂಂ ದೂ.08392-258100 ಅಥವಾ ಬಳ್ಳಾರಿ ಎಸ್.ಪಿ ಅವರ ಕಚೇರಿ ದೂ.08392-258300, ತೋರಣಗಲ್ಲು ಡಿವೈಎಸ್‍ಪಿ ದೂ.9480803010, ಸಂಡೂರು ವೃತ್ತ ಸಿ.ಪಿ.ಐ ದೂ.08395-260100, 9480803036, ತೋರಣಗಲ್ಲು ಪೆÇಲೀಸ್ ಠಾಣೆ ದೂ.08395-250100, ಮೊ.9480803062 ಗೆ ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್