ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ : ಸಿದ್ದರಾಮಯ್ಯ
ಮೈಸೂರು, 24 ಮೇ (ಹಿ.ಸ.) : ಆ್ಯಂಕರ್ : ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿ
Cm


ಮೈಸೂರು, 24 ಮೇ (ಹಿ.ಸ.) :

ಆ್ಯಂಕರ್ : ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಬಸವ ಜಯಂತಿ-2025 ನಮ್ಮ ನಡೆ ಅನುಭವ ಮಂಟಪದ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿದರು.

ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande