ಮುಂಬಯಿ, 24 ಮೇ (ಹಿ.ಸ.) :
ಆ್ಯಂಕರ್ : ಬಾಲಿವುಡ್ ನಟ ಮುಕುಲ್ ದೇವ್ (54) ನಿಧನರಾಗಿದ್ದಾರೆ. 'ಸನ್ ಆಫ್ ಸರ್ದಾರ್', 'ಜೈ ಹೋ' ಸೇರಿದಂತೆ ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಇತ್ತೀಚೆಗೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ನಟ ವಿಂದು ದಾರಾ ಸಿಂಗ್ ತಿಳಿಸಿದ್ದಾರೆ.
1996ರಲ್ಲಿ 'ದಸ್ತಕ್' ಚಿತ್ರದ ಮೂಲಕ ಸಿನಿರಂಗ ಪ್ರವೇಶಿಸಿದ ಮುಕುಲ್, ಹಿಂದಿ, ಪಂಜಾಬಿ, ಬಂಗಾಳಿ, ಗುಜರಾತಿ, ಮಲಯಾಳಂ ಮತ್ತು ಕನ್ನಡ ಚಿತ್ರಗಳಲ್ಲಿಯೂ ನಟಿಸಿದ್ದರು. ಅವರ ಅಕಾಲಿಕ ನಿಧನ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa