ಬೆಳಗಾವಿ, 24 ಮೇ (ಹಿ.ಸ.) :
ಆ್ಯಂಕರ್ : ಬೆಳಗಾವಿ ನಗರದ 25 ವರ್ಷದ ಗರ್ಭಿಣಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸದ್ಯ ಆ ಗರ್ಭಿಣಿ ಮಹಿಳೆಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಈಶ್ವರ ಗಡಾದಿ , 'ದೇಶದ ವಿವಿಧೆಡೆ ಕೊರೊನಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರದಿಂದ ಮಾರ್ಗಸೂಚಿ ಬಂದಿದೆ. ಸರ್ಕಾರದ ಸೂಚನೆ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ತಲಾ 5 ಹಾಸಿಗೆ ಮೀಸಲಿಡಲಾಗಿದೆ. ಕೊರೊನಾ ವೈರಸ್ ಸಂಬಂಧ ಎಲ್ಲ ರೀತಿಯ ಮುಂಜಾಗ್ರತೆ ಕೈಗೊಳ್ಳಲಾಗಿದೆ. ವೃದ್ಧರು, ಒಂದು ವರ್ಷದ ಮಕ್ಕಳು ಹಾಗೂ ಕ್ಯಾನ್ಸರ್ ಪೀಡಿತರು ಜನ ಸಂದಣಿಯಲ್ಲಿ ಸೇರಬಾರದು. ಆದಷ್ಟು ಅಂತರ ಕಾಯ್ದುಕೊಳ್ಳಬೇಕು. ಕೊರೊನಾ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa