ಕೋವಿಡ್ ಆತಂಕ ಬೇಡ :ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು, 24 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ೩೫ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ೩೨ ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಉಳಿದ ೩ ಪ್ರಕರಣಗಳು ಇತರ ಜಿಲ್ಲೆಗಳಿಗೆ ಸೇರಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್
Gundurao


ಬೆಂಗಳೂರು, 24 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ೩೫ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ೩೨ ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಉಳಿದ ೩ ಪ್ರಕರಣಗಳು ಇತರ ಜಿಲ್ಲೆಗಳಿಗೆ ಸೇರಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ.

ಈ ಕುರಿತು ಸರ್ಕಾರ ಹಾಗೂ ಆರೋಗ್ಯ ಇಲಾಖೆ ಸನ್ನದ್ಧವಾಗಿದ್ದು, ಕೇಂದ್ರ ಸರ್ಕಾರದೊಂದಿಗೆ ನೇರ ಸಂಪರ್ಕದಲ್ಲಿದೆ. ತಾಂತ್ರಿಕ ಸಮಿತಿಯ ಮಾರ್ಗದರ್ಶನದಂತೆ ಕ್ರಮ ಕೈಗೊಳ್ಳಲಾಗುತ್ತಿದೆ, ಎಂದು ಸಚಿವರು ಹೇಳಿದರು. ಉಸಿರಾಟದ ತೊಂದರೆ ಅಥವಾ ತೀವ್ರ ಉಸಿರಾಟದ ಸೋಂಕು ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಒಂದು ತಿಂಗಳ ಅವಧಿಗೆ ಸಾಕಾಗುವಷ್ಟು ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ಮುಂಗಡವಾಗಿ ಒದಗಿಸಿಡಲು ಈಗಾಗಲೇ ಸೂಚಿಸಲಾಗಿದೆ. ಅಗತ್ಯವಿದ್ದರೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಗಂಭೀರ ಲಕ್ಷಣಗಳು ಇಲ್ಲದೆ, ಸಣ್ಣಪಟ್ಟ ತೊಂದರೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಜನಸಂಚಾರ ಹೆಚ್ಚು ಇರುವ ಪ್ರದೇಶಗಳಲ್ಲಿ, ಗರ್ಭಿಣಿಯರು,ಬಾಣಂತಿಯರು, ವಯೋವೃದ್ದರು ಹಾಗೂ ಚಿಕ್ಕ ಮಕ್ಕಳು ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ. ಸಾರ್ವಜನಿಕರು ಭಯಭೀತರಾಗದೆ, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಜಾಗರೂಕತೆಯಿಂದ ವರ್ತಿಸುವುದು ಸೂಕ್ತ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande