ಹೊಸಪೇಟೆ, 24 ಮೇ (ಹಿ.ಸ.)
ಆ್ಯಂಕರ್: ಜಿಲ್ಲಾ ಮಟ್ಟದ ಡೆಂಗಿ ದಿನಾಚರಣೆ ನಿಮಿತ್ತ ನಗರದ ಅಂಬೇಡ್ಕರ್ ವೃತ್ತದಲ್ಲಿ, ಮೆ.26 ರಂದು, ಬೆಳಿಗ್ಗೆ 9 ಗಂಟೆಗೆ ಮಾನವ ಸರಪಳಿ ರಚಿಸುವ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಜಿಲ್ಲಾ ವಿಬಿಡಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್