ನವದೆಹಲಿ, 24 ಮೇ (ಹಿ.ಸ.) :
ಆ್ಯಂಕರ್ : ಹಾರ್ವರ್ಡ್ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಮತ್ತು ಆಪ್ ಸಂಸದ ರಾಘವ್ ಚಡ್ಡಾ, ಟ್ರಂಪ್ ಆಡಳಿತದ ವಿದೇಶಿ ವಿದ್ಯಾರ್ಥಿಗಳ ದಾಖಲೆ ನಿರ್ಬಂಧ ಕ್ರಮವನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಪಾಯ, ಎಂದು ಅವರು ಹೇಳಿದ್ದಾರೆ.
ಶೈಕ್ಷಣಿಕ ಸ್ವಾತಂತ್ರ್ಯಕ್ಕೆ ಬೆಂಬಲ ಸೂಚಿಸಲು 'ಸಪೋರ್ಟ್ ಹಾರ್ವರ್ಡ್' ಟೀ-ಶರ್ಟ್ ಧರಿಸಿರುವ ಚಡ್ಡಾ, ಹಾರ್ವರ್ಡ್ ಕ್ರಮವನ್ನು ಸಮರ್ಥಿಸಿದ್ದಾರೆ. ಹಾರ್ವರ್ಡ್ ಕೂಡಾ ಟ್ರಂಪ್ ಆಡಳಿತದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa