ಹೊಸಪೇಟೆ, 24 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ 2ನೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಮೇ 26 ರಿಂದ ಜೂ.2 ರವರೆಗೆ ಸುಗಮವಾಗಿ ನಡೆಯಲು ಎಲ್ಲಾ ರೀತಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ತಿಳಿಸಿದ್ದಾರೆ.
ಎಸ್‍ಎಸ್‍ಲ್‍ಸಿ ಪರೀಕ್ಷೆಗಳು ಪಾರದರ್ಶಕವಾಗಿ, ಕಟ್ಟುನಿಟ್ಟಾಗಿ, ಸುಗಮವಾಗಿ ನಡೆಸುವ ಹಿತದೃಷ್ಟಿಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ.
ಅಧಿಕಾರಿಗಳು ಪರೀಕ್ಷಾ ವೇಳಾ ಪಟ್ಟಿಯಂತೆ ನಿಯೋಜಿಸಿದ ಕೇಂದ್ರಗಳಲ್ಲಿ ಪರೀಕ್ಷಾ ಪೂರ್ವ ಸಿದ್ದತೆಯನ್ನು ಮಾಡಿಕೊಂಡಿರುವ ಬಗ್ಗೆ ಖಚಿತ ಪಡಿಸಿಕೊಂಡು ಮೂಲಭೂತ ಸೌಕರ್ಯಗಳಾದ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಗಾಳಿ ಮತ್ತು ಬೆಳಕಿನ ವ್ಯವಸ್ಥೆಗಳನ್ನು ಒದಗಿಸಿಕೊಂಡಿರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್