ವಸತಿ ಶಾಲೆ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಶಿವಮೊಗ್ಗ, 25 ಮೇ (ಹಿ.ಸ.) : ಆ್ಯಂಕರ್ : 2025–26ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ, ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ವಿಶೇಷ ವರ್ಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಫಾಯಿ ಕರ್
ವಸತಿ ಶಾಲೆ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ


ಶಿವಮೊಗ್ಗ, 25 ಮೇ (ಹಿ.ಸ.) :

ಆ್ಯಂಕರ್ : 2025–26ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ, ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ವಿಶೇಷ ವರ್ಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಫಾಯಿ ಕರ್ಮಚಾರಿ, ಬಾಲ ಕಾರ್ಮಿಕ, ಅಂಗವಿಕಲ, ಅನಾಥ, ದೇವದಾಸಿಯರ ಮಕ್ಕಳು, ಅಲೆಮಾರಿ ಸಮುದಾಯದವರು ಸೇರಿದಂತೆ ಅರ್ಹ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಆಸಕ್ತರು https://kreis.karnataka.gov.in ಮೂಲಕ ಅಥವಾ ನೇರವಾಗಿ ಶಾಲೆಗೆ ತೆರಳಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9482300400 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande