ಕೋವಿಡ್ ತಪಾಸಣೆಗೆ ಸರಕಾರದಿಂದ ಸುತ್ತೋಲೆ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕೋವಿಡ್ -19 ಟೆಸ್ಟಿಂಗ್ ಗೆ ಅಗತ್ಯ ತಪಾಸಣಾ ಕಿಟ್ ಗಳ ಲಭ್ಯತೆಯಿದೆ. ಸಾರಿ ಪ್ರಕರಣಗಳಲ್ಲಿ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತಾಗಿ ಸರಕಾರ ಸುತ್ತೋಲೆ ಹೊರಡಿಸಿದ್ದು,
Covid


ಬೆಂಗಳೂರು, 25 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕೋವಿಡ್ -19 ಟೆಸ್ಟಿಂಗ್ ಗೆ ಅಗತ್ಯ ತಪಾಸಣಾ ಕಿಟ್ ಗಳ ಲಭ್ಯತೆಯಿದೆ. ಸಾರಿ ಪ್ರಕರಣಗಳಲ್ಲಿ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತಾಗಿ ಸರಕಾರ ಸುತ್ತೋಲೆ ಹೊರಡಿಸಿದ್ದು, ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ ವಿಆರ್ ಡಿಎಲ್ ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ‌ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, ಎನ್ ಐವಿ ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ತಪಾಸಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ತಿಂಗಳಿಗಾಗುವಷ್ಟು 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ತೆಗೆದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಸೂಕ್ತ ಆರೋಗ್ಯ ಸೇವೆ ಒದಗಿಸಲು ಸನ್ನದ್ಧವಾಗಿದೆ ಎಂದು ಗುಂಡೂರಾವ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande