ಮಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಂಗಳೂರು ನಗರ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಕೆಂಪು ಎಚ್ಚರಿಕೆ ಘೋಷಿಸಿದೆ.
ಮಂಗಳೂರಿನ ಪಂಪ್ವೆಲ್ ಸೇರಿ ಹಲವು ರಸ್ತೆಗಳು ಜಲಾವೃತಗೊಂಡಿವೆ. ಕೆಲವೆಡೆ ಮರಗಳು ಧರೆಗೆ ಉರುಳಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa