ಶಿವಮೊಗ್ಗ: ಕೀಟ ಸಂಗ್ರಹಕಾರರ ಹುದ್ದೆಗೆ ನೇರ ಸಂದರ್ಶನ
ಶಿವಮೊಗ್ಗ, 25 ಮೇ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಯೋಜನೆಯಡಿ ಒಂದು ಕೀಟ ಸಂಗ್ರಹಕಾರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಜೂನ್ 2ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯ
ಶಿವಮೊಗ್ಗ: ಕೀಟ ಸಂಗ್ರಹಕಾರರ ಹುದ್ದೆಗೆ ನೇರ ಸಂದರ್ಶನ


ಶಿವಮೊಗ್ಗ, 25 ಮೇ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಯೋಜನೆಯಡಿ ಒಂದು ಕೀಟ ಸಂಗ್ರಹಕಾರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಜೂನ್ 2ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಪಿಯುಸಿ ಉತ್ತೀರ್ಣರಾಗಿರುವ ಹಾಗೂ ಈ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದು.

ಸಂಚಿತ ಮಾಸಿಕ ವೇತನ ರೂ.16,575/- ನಿಗದಿಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande