ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಉಡುಪಿ, 25 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ, ಮೇ 26ರವರೆಗೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ವಾಡಿಕೆಗಿಂತ ಒಂದು ವಾರ ಮೊದಲೇ ಮುಂಗಾರು ರ
ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ


ಉಡುಪಿ, 25 ಮೇ (ಹಿ.ಸ.) :

ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ, ಮೇ 26ರವರೆಗೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ವಾಡಿಕೆಗಿಂತ ಒಂದು ವಾರ ಮೊದಲೇ ಮುಂಗಾರು ರಾಜ್ಯದ ಕರಾವಳಿ ಪ್ರವೇಶಿಸಿದೆ. ಸಾಮಾನ್ಯವಾಗಿ ಮೇ 31ರ ಸುಮಾರಿಗೆ ಮುಂಗಾರು ಕೇರಳ ಪ್ರವೇಶಿಸುತ್ತಿತ್ತು. ಆದರೆ ಈ ಬಾರಿ ಮೇ 24ಕ್ಕೇ ಕೇರಳ ಕರಾವಳಿ ತಲುಪಿದ್ದು, ಇದರ ಬೆನ್ನಲ್ಲೇ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆ ಶುರುವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande