ಸರಕಾರದ ಆರ್ಥಿಕ ಪರಿಸ್ಥಿತಿ ದಿವಾಳಿ : ವಿಜಯೇಂದ್ರ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ರಾಜ್ಯದ ಹಣಕಾಸು ಪರಿಸ್ಥಿತಿ ತೀರಾ ಹದಗೆಟ್ಟಿದೆ. ವಿಧಾನಸೌಧ ವೀಕ್ಷಣೆಗೂ ಶುಲ್ಕ ವಿಧಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಜಗಜ್ಜಾಹೀರುಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರಕಾರದ ವಿರು
Byv


ಬೆಂಗಳೂರು, 25 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದ ಹಣಕಾಸು ಪರಿಸ್ಥಿತಿ ತೀರಾ ಹದಗೆಟ್ಟಿದೆ. ವಿಧಾನಸೌಧ ವೀಕ್ಷಣೆಗೂ ಶುಲ್ಕ ವಿಧಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಜಗಜ್ಜಾಹೀರುಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿ ಬದುಕು ಎನ್ನವ ಮೂಲಕ ಕಾಂಗ್ರೆಸ್‌ ಸರ್ಕಾರ ಮತ್ತೊಂದು ನಾಟಕ ಆರಂಭಿಸಿದೆ. ತಿಂಗಳಿಗೆ 2 ಸಾವಿರ ನೀಡಿದರೆ ಗ್ರಾಮೀಣ ಜನರ ಬದುಕು ಹಸನಾಗುವುದಿಲ್ಲ. ರಾಜ್ಯ ಸರ್ಕಾರ ರಿಯಲ್‌ ಎಸ್ಟೇಟ್‌ ಏಜೆಂಟ್‌ಗಳಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande