ನವದೆಹಲಿ, 25 ಮೇ (ಹಿ.ಸ.) :
ಆ್ಯಂಕರ್ : ಭಾನುವಾರ ಮುಂಜಾನೆ ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದಾಗಿ ವಿಮಾನಗಳ ಹಾರಾಟಕ್ಕೆ ವ್ಯತ್ಯಯ ಉಂಟಾಗಿದೆ.
ವಿಮಾನ ನಿಲ್ದಾಣದ ಅಧಿಕಾರಿಗಳು ಬೆಳಿಗ್ಗೆ 6.50ರ ವೇಳೆಗೆ ಪ್ರತಿಕೂಲ ಹವಾಮಾನದಿಂದಾಗಿ ಕೆಲವು ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸಿಕೊಳ್ಳುವಂತೆ ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪ್ರಕಟಣೆ ಬಿಡುಗಡೆ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa