ಇಸ್ಲಾಮಾಬಾದ್, 25 ಮೇ (ಹಿ.ಸ.) :
ಆ್ಯಂಕರ್ : ಭಾರತ ನಡೆಸಿದ ಆಪರೇಷನ್ ಸಿಂಧೂರ್ ದಾಳಿಯಿಂದ ಭಯಭೀತವಾದ ಪಾಕಿಸ್ತಾನ, ತನ್ನ ರಕ್ಷಣಾ ಬಜೆಟ್ ಅನ್ನು 2025-26ರ ಹಣಕಾಸು ವರ್ಷದಲ್ಲಿ ಗಣನೀಯವಾಗಿ ಹೆಚ್ಚಿಸಲು ತೀರ್ಮಾನಿಸಿದೆ.
ಭಾರತದ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಯೋಜನಾ ಸಚಿವ ಅಹ್ಸಾನ್ ಇಕ್ಬಾಲ್ ದೇಶದ ಭದ್ರತೆಗಾಗಿ ಬಜೆಟ್ ಹೆಚ್ಚಳ ಅಗತ್ಯವಿದೆ ಎಂದು ಹೇಳಿದರು. ಜೂನ್ 10ರಂದು ಬಜೆಟ್ ಮಂಡನೆಯಾಗುವ ನಿರೀಕ್ಷೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa