ಬಳ್ಳಾರಿ, 26 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪರೀಕ್ಷೆ 2025ನೇ ಸಾಲಿನ ಎಸ್‌ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಗಳಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕಗಳು ಪಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಆನ್‌ಲೈನ್ ವೆಬ್‌ಸೈಟ್ https://ksgeanews.blogspot.com ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ.
ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರೂ ಆದ ಎಂ.ಎ.ಆಸೀಫ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್