ಕೊಪ್ಪಳ, 26 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಹಾಗೂ ಗಂಗಾವತಿಯಲ್ಲಿ ಖಾಲಿ ಇರುವ ತಜ್ಞವೈದ್ಯರು ಹಾಗೂ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕ ಹಾಗೂ ಜಿಲ್ಲಾ ವೆಬ್‌ಸೈಟ್ www.koppal.nic.in ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಪಟ್ಟಿಯನ್ನು ಪರಿಶೀಲಿಸಿ ಮೇ 27 ರಿಂದ ಜೂನ್ 05 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್