7 Jun 2025, 22:49 HRS IST

ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನಿಯೋಗದಿಂದ ಮುಖ್ಯಮಂತ್ರಿ ಭೇಟಿ
ಬೆಂಗಳೂರು, 26 ಮೇ (ಹಿ.ಸ.) : ಆ್ಯಂಕರ್ : ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಪರವಾನಿಗೆ ಶುಲ್ಕ‌ , ಮೊಲಾಸಸ್ ಮೇಲಿನ ಶುಲ್ಕ ಕಡಿಮೆ ಮಾಡುವಂತೆ ಹಾಗೂ ಇನ್ನಿತರ ಬೇ
Meet


ಬೆಂಗಳೂರು, 26 ಮೇ (ಹಿ.ಸ.) :

ಆ್ಯಂಕರ್ : ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿದರು.

ಪರವಾನಿಗೆ ಶುಲ್ಕ‌ , ಮೊಲಾಸಸ್ ಮೇಲಿನ ಶುಲ್ಕ ಕಡಿಮೆ ಮಾಡುವಂತೆ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದರು. ನಿಯೋಗದ ಬೇಡಿಕೆಗಳನ್ನು ಅಬಕಾರಿ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಅಬಕಾರಿ ಸಚಿವರಾದ ಆರ್ ಬಿ ತಿಮ್ಮಾಪುರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಸೇರಿದಂತೆ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande