ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ
ಪಂಚಕುಲ, 27 ಮೇ (ಹಿ.ಸ.) : ಆ್ಯಂಕರ್ : ಉತ್ತರಾಖಂಡದ ಡೆಹ್ರಾಡೂನ್ ಮೂಲದ ಉದ್ಯಮಿ ಪ್ರವೀಣ್ ಮಿತ್ತಲ್ ಅವರು ಕುಟುಂಬದ ಆರು ಸದಸ್ಯರೊಂದಿಗೆ ಪಂಚಕುಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಕುಟುಂಬದ ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿ
Suicide


ಪಂಚಕುಲ, 27 ಮೇ (ಹಿ.ಸ.) :

ಆ್ಯಂಕರ್ : ಉತ್ತರಾಖಂಡದ ಡೆಹ್ರಾಡೂನ್ ಮೂಲದ ಉದ್ಯಮಿ ಪ್ರವೀಣ್ ಮಿತ್ತಲ್ ಅವರು ಕುಟುಂಬದ ಆರು ಸದಸ್ಯರೊಂದಿಗೆ ಪಂಚಕುಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಕುಟುಂಬದ ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ಸೋಮವಾರ ರಾತ್ರಿ ಕಾರಿನಲ್ಲಿ ವಿಷ ಸೇವಿಸಿದ್ದ ಕುಟುಂಬದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದರು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಮಿತ್ತಲ್ ಅವರ ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಮಗ ಸೇರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande