ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ, 27 ಮೇ (ಹಿ.ಸ.) : ಆ್ಯಂಕರ್ : ಸಂಡೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ, 27 ಮೇ (ಹಿ.ಸ.) :

ಆ್ಯಂಕರ್ : ಸಂಡೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳು 6 ರಿಂದ 10 ನೇ ತರಗತಿಯವರೆಗೆ 2025-26 ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು.

ಸಂಡೂರು ತಾಲ್ಲೂಕಿನ ಸಂಡೂರು ಟೌನ್, ಚೋರನೂರು, ಬೊಮ್ಮಘಟ್ಟ ಇಲ್ಲಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಮತ್ತು ಸಂಡೂರು ಟೌನ್, ದರೋಜಿ ಇಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ವೆಬ್‍ಸೈಟ್ http://bcwd.karnataka.gov.in/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಡೂರು ಪಟ್ಟಣದ ವಾಲ್ಮೀಕಿ ವತ್ತದ ತಾಲ್ಲೂಕು ಹಿಂದುಳಿದ ವರ್ಗಗಳ ಕಾರ್ಯಾಲಯ ಅಥವಾ ದೂ.08395-295180 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೀರಭದ್ರಯ್ಯ ಹಿರೇಮಠ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande