ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು
ಮಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಮಂಗಳೂರು ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪ ಇರಾಕೋಡಿಯಲ್ಲಿ ಮಂಗಳವಾರ ಮಧ್ಯಾಹ್ನ ಪಿಕಪ್ ವಾಹನ ಚಾಲಕ ಹನೀಫ್‌ನ ಸಹೋದರ ರಹೀಮ್ ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರಹೀಮ್ ಮರಳು ಖಾಲಿ ಮಾಡುತ್ತಿದ್ದ ಸಂದರ್ಭ ದ್
Murder


ಮಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ಮಂಗಳೂರು ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪ ಇರಾಕೋಡಿಯಲ್ಲಿ ಮಂಗಳವಾರ ಮಧ್ಯಾಹ್ನ ಪಿಕಪ್ ವಾಹನ ಚಾಲಕ ಹನೀಫ್‌ನ ಸಹೋದರ ರಹೀಮ್ ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ರಹೀಮ್ ಮರಳು ಖಾಲಿ ಮಾಡುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ರಹೀಮ್ ಜೊತೆಗಿದ್ದ ಇನ್ನೋರ್ವ ಶಾಫಿ ಎಂಬಾತನ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ ಮೂರನೇ ಕೊಲೆ ಪ್ರಕರಣವಾಗಿದ್ದು, ಕಾರಣ ಇನ್ನೂ ಬಹಿರಂಗವಾಗಿಲ್ಲ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande