ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದ್ದು, ಹಲವೆಡೆ ಭಾರಿ ಮಳೆಯ ಮುನ್ಸೂಚನೆ ಇದೆ. ಕರಾವಳಿ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೆ ಕೆಂಪು ಎಚ್ಚರಿಕೆ ನೀಡಲಾಗಿದೆ, ಬಾಗಲಕೋಟೆ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರಕ್ಕೆ ಕಿತ್ತಳೆ ಎಚ್ಚರಿಕೆ, ತುಮಕೂರು ಸೇರಿ
ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದ್ದು, ಹಲವೆಡೆ ಭಾರಿ ಮಳೆಯ ಮುನ್ಸೂಚನೆ ಇದೆ. ಕರಾವಳಿ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೆ ಕೆಂಪು ಎಚ್ಚರಿಕೆ ನೀಡಲಾಗಿದೆ, ಬಾಗಲಕೋಟೆ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರಕ್ಕೆ ಕಿತ್ತಳೆ ಎಚ್ಚರಿಕೆ, ತುಮಕೂರು ಸೇರಿದಂತೆ 8 ಜಿಲ್ಲೆಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದಿಂದ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande