ಯಲಬುರ್ಗಾ, 27 ಮೇ (ಹಿ.ಸ.) :
ಆ್ಯಂಕರ್ : ಔಷಧಿ ತುಂಬಿದ್ದ ಲಾರಿಯ ಚಾಲಕನ ನಿದ್ರೆಯ ಮಂಪರಿನಿಂದಾಗಿ ಡಿವೈಡರ್‍ಗೆ ಡಿಕ್ಕಿಯಾಗಿ ಲಾರಿ ಪಲ್ಟಿಯಾಗಿ ಲಕ್ಷಾಂತರ ರುಪಾಯಿ ಮೌಲ್ಯದ ಔಷಧಿಗಳು ರಸ್ತೆಯ ತುಂಬೆಲ್ಲಾ ಚಲ್ಲಾಪಿಲ್ಲಿಯಾಗಿ ಚದುರಿ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮಾಟಲದಿನ್ನಿ ಗ್ರಾಮದ ಬಳಿ ಸೋಮವಾರ ನಸುಕಿನಲ್ಲಿ ನಡೆದಿದೆ.
ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗುಜರಾತ್‍ನ ಅಹಮಾಬಾದ್‍ನಿಂದ ಬೆಂಗಳೂರಿಗೆ ಹೊರಟಿದ್ದ ಔಷಧಿಗಳನ್ನು ತುಂಬಿಕೊಂಡಿದ್ದ ಲಾರಿಯ ಚಾಲಕನಿಗೆ ಮಂಪರು ನಿದ್ದೆ ಕಾಡಿದಾಗ ಈ ಘಟನೆ ನಡೆದಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಅಪಘಾತದಲ್ಲಿ ಚಾಲಕರಾದ ಮೊಹಮ್ಮದ್ ಜಾಕಿರ್ ಹುಸೇನ್ ಹಾಗೂ ಮೊಹಮ್ಮದ್ ಪಾಷಾ ಗಾಯಗೊಂಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೇವೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್