ಬೆಂಗಳೂರು ಕಾನೂನು ಸುವ್ಯವಸ್ಥೆ ಕುರಿತು ಪರಮೇಶ್ವರ ಸಭೆ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಕಾನೂನು ಸುವ್ಯವಸ್ಥೆಯ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬೆಂಗಳೂರು ನಗರದಲ್ಲಿ ಸಂಚಾರ ಸಮಸ್ಯೆ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಕ್ರಮ, ಮಾದಕ ದ್ರವ್ಯ ಕಡಿವಾಣ ಹಾಗೂ
Meeting


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಕಾನೂನು ಸುವ್ಯವಸ್ಥೆಯ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಬೆಂಗಳೂರು ನಗರದಲ್ಲಿ ಸಂಚಾರ ಸಮಸ್ಯೆ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಕ್ರಮ, ಮಾದಕ ದ್ರವ್ಯ ಕಡಿವಾಣ ಹಾಗೂ ಸೈಬರ್ ಕ್ರೈಂ ಕುರಿತು ಮಾಹಿತಿ ಪಡೆದು. ಕಟ್ಟುನಿಟ್ಟಿ‌ನ ಕ್ರಮ ವಹಿಸಲು ಸೂಚನೆ ನೀಡಿದರು.

ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.‌ ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ವಿಕಾಶ್ ಕುಮಾರ್ ವಿಕಾಸ್, ರಮೇಶ್ ಬಾನೋತ್, ಸಂಚಾರ ವಿಭಾಗ ಜಂಟಿ ಆಯುಕ್ತ ಎಂ.ಎನ್.ಅನುಚೇತ್, ಸಿಸಿಬಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಚಂದ್ರಗುಪ್ತ ಹಾಗೂ ಎಲ್ಲ ವಿಭಾಗದ ಉಪ ಪೊಲೀಸ್ ಆಯುಕ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande