ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 : ಜೂನ್ 02ರವರೆಗೆ ನಿಷೇಧಾಜ್ಞೆ
ರಾಯಚೂರು, 27 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರ ಪರೀಕ್ಷೆಯು ಜಿಲ್ಲೆಯಲ್ಲಿ ಜೂನ್ 2ರವರೆಗೆ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ ಕಲಂ 163ರ ಅನ್ವಯ ನಿಷೇಧಾಜ್ಞೆ ಜಾರಿ ಮಾ
ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 : ಜೂನ್ 02ರವರೆಗೆ ನಿಷೇಧಾಜ್ಞೆ


ರಾಯಚೂರು, 27 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರ ಪರೀಕ್ಷೆಯು ಜಿಲ್ಲೆಯಲ್ಲಿ ಜೂನ್ 2ರವರೆಗೆ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ ಕಲಂ 163ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ., ಅವರು ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶ ವ್ಯಾಪ್ತಿಯ ಪರೀಕ್ಷೆ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಯಾರೂ ನಿಷೇಧಿತ ಪ್ರದೇಶವನ್ನು ಪ್ರವೇಶಿಸಕೂಡದು., ಸದರಿ ದಿನಗಳಂದು ಪರೀಕ್ಷೆ ಕೇಂದ್ರಗಳಿಗೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್‍ಗಳು, ಪಠ್ಯ ಪುಸ್ತಕಗಳು ಹಾಗೂ ಕ್ಯಾಲ್ಕುಲೇಟರ್‍ಗಳು ತರುವುದನ್ನು ನಿಷೇಧಿಸಿದೆ., ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಝರಾಕ್ಸ್ ಅಂಗಡಿಗಳನ್ನು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಕಡ್ಡಾಯ ಮುಚ್ಚಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande