ಸಂಚಾರಿ ಆರೋಗ್ಯ ಘಟಕಗಳಿಗೆ ಸಂತೋಷ್‌ ಲಾಡ್‌ ಚಾಲನೆ
ಧಾರವಾಡ, 27 ಮೇ (ಹಿ.ಸ.) : ಆ್ಯಂಕರ್ : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ , ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಗಳಿಗೆ
Covid alert


ಧಾರವಾಡ, 27 ಮೇ (ಹಿ.ಸ.) :

ಆ್ಯಂಕರ್ : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ , ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಗಳಿಗೆ ಧಾರವಾಡದಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಗೆ ಸಂಚಾರಿ ಆರೋಗ್ಯ ಘಟಕಗಳನ್ನು ನೀಡಲಾಗಿದೆ. ನೋಂದಾಯಿತ ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ಹೇಳಿದರು.

ಕಟ್ಟಡ ನಿರ್ಮಾಣ ಪ್ರದೇಶಗಳಿಗೆ ಹೋಗಿ, ಜ್ವರ, ಕೆಮ್ಮು, ಮಧುಮೇಹ, ರಕ್ತದೊತ್ತಡ, ರಕ್ತ ಪರೀಕ್ಷೆ ಸೇರಿದಂತೆ ಸುಮಾರು 20 ರೀತಿಯ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ತಪಾಸಣೆ ಕುರಿತ ಅವರ ದಾಖಲೆಗಳು ಆನ್ ಲೈನ್ ಮೂಲಕ ನೇರವಾಗಿ ಕಾರ್ಮಿಕ ಇಲಾಖೆಯ ಮುಖ್ಯ ಕಚೇರಿಗೆ ತಲುಪುತ್ತದೆ. ಕಾರ್ಮಿಕರ ಅಧಿಕೃತ ದಾಖಲೆಗಳನ್ನು ಅಂತರ್ಜಾಲದ ಮೂಲಕ ದೃಢ ಪಡಿಸಿಕೊಳ್ಳಲಾಗುತ್ತದೆ ಎಂದರು.

ಕಾರ್ಯಾದೇಶ ಪಡೆದಿರುವ ಸಂಸ್ಥೆಗಳು ಪ್ರತಿ ತಿಂಗಳು ಸಂಚಾರಿ ಆರೋಗ್ಯ ಕ್ಲಿನಿಕ್ ಸಂಚರಿಸುವ ಮಾರ್ಗ, ಸ್ಥಳದ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಿ, ಖಾತರಿಪಡಿಸಿಕೊಳ್ಳಬೇಕು. ಪ್ರತಿ ತಿಂಗಳ ರೂಟ್ ಮ್ಯಾಪ್‍ಗಳನ್ನು ಕನಿಷ್ಠ 15 ದಿನಗಳ ಮುಂಚಿತವಾಗಿ ಸಿದ್ದಪಡಿಸಿ, ವಾಹನಗಳು ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರಚಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande