ಅಬ್ದುಲ್ ರಹೀಂ ಹತ್ಯೆ : ೧೫ ಜನರ ವಿರುದ್ದ ಪ್ರಕರಣ
ಮಂಗಳೂರು, 28 ಮೇ (ಹಿ.ಸ.) : ಆ್ಯಂಕರ್ : ಮಂಗಳೂರು ಜಿಲ್ಲೆಯ ಬಂಟ್ವಾಳದ ಕುರಿಯಾಳದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದ ಯುವಕ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಕೊಲೆಯತ್ನ ಪ್ರಕರಣಕ್ಕೆ
Fir


ಮಂಗಳೂರು, 28 ಮೇ (ಹಿ.ಸ.) :

ಆ್ಯಂಕರ್ : ಮಂಗಳೂರು ಜಿಲ್ಲೆಯ ಬಂಟ್ವಾಳದ ಕುರಿಯಾಳದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದ ಯುವಕ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಮತ್ತು ಸುಮಿತ್ ಸೇರಿದಂತೆ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಗಾಯಗೊಂಡ ಕಲಂದ‌ರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ಎಫ್ಐಆರ್​ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ ಹೊಳೆ ಬದಿಯಿಂದ ಪಿಕ್ಅಪ್‌ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ಮನೆಯೊಂದರ ಬಳಿ ಇಳಿಸುತ್ತಿದ್ದರು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್‌ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್‌ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಇದನ್ನು ತಡೆಯಲು ಹೋದ ಕಲಂದರ್ ಶಾಫಿಗೂ ಚೂರಿಯಿಂದ ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್​ನಿಂದ ಕಡಿದಿದ್ದಾರೆ. ಈ ವೇಳೆ ಸ್ಥಳಿಯರು ಕೂಗಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯಿಂದ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಹಾಗೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವ‌ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಮೇ 30ರ ಸಂಜೆ 6ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande