ಶಿವಮೊಗ್ಗ, 28 ಮೇ (ಹಿ.ಸ.):
ಆ್ಯಂಕರ್:
ರೈಲ್ವೇ ಇಲಾಖೆಯು ಸೆಕ್ಯೂರಿಟಿ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಮಾಜಿ ಸೈನಿಕರುಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಆಸಕ್ತ ಮಾಜಿ ಸೈನಿಕರುಗಳಿಂದ ಅರ್ಜಿ ಆಹ್ವಾನಿಸಿದ್ದು, ಈವರೆಗೆ 48 ಮಾಜಿ ಸೈನಿಕರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು, ನೋಂದಾಯಿತರ ಪಟ್ಟಿಯನ್ನು ಕಛೇರಿಯ ಸೂಚನಾ ಫಲಕದಲ್ಲಿ ಹಾಕಲಾಗಿದೆ.
ಈ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದರೆ ಮೇ 30 ಒಳಗೆ ಈ ಕಛೇರಿಯಲ್ಲಿ ಸಲ್ಲಿಸಬಹುದಾಗಿದೆಯೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa