ಬೆಲೆ ಏರಿಕೆ ವಿರುದ್ಧ ಬಿಬಿಎಂಪಿಗೆ ಬಿಜೆಪಿ ಮನವಿ
ಬೆಂಗಳೂರು, 28 ಮೇ (ಹಿ.ಸ.): ಆ್ಯಂಕರ್:ಬೆಂಗಳೂರಿನ ಜನತೆಯ ಮೇಲೆ ಪದೇ ಪದೇ ಬೆಲೆ ಏರಿಕೆಯ ಭಾರ ಹೊರಿಸಿ, ಸಾಮಾನ್ಯ ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯ ವಿರುದ್ಧ ಬಿಜೆಪಿ ನಾಯಕರ ನಿಯೋಗ ಬಿಬಿಎಂಪಿ ಕಚೇರಿಗೆ ತೆರಳಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಗೆ ಮ
Bjp


ಬೆಂಗಳೂರು, 28 ಮೇ (ಹಿ.ಸ.):

ಆ್ಯಂಕರ್:ಬೆಂಗಳೂರಿನ ಜನತೆಯ ಮೇಲೆ ಪದೇ ಪದೇ ಬೆಲೆ ಏರಿಕೆಯ ಭಾರ ಹೊರಿಸಿ, ಸಾಮಾನ್ಯ ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯ ವಿರುದ್ಧ ಬಿಜೆಪಿ ನಾಯಕರ ನಿಯೋಗ ಬಿಬಿಎಂಪಿ ಕಚೇರಿಗೆ ತೆರಳಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ, ಪರಿಷತ್ ವಿಪಕ್ಷ ನಾಯಕ ಚಲುವಾದಿ ನಾರಾಯಣಸ್ವಾಮಿ , ನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರುಗಳು ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande