ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ಮಾಜಿ ಯೋಧರ ಕಲ್ಯಾಣಕ್ಕಾಗಿ ರಾಜ್ಯದಲ್ಲಿ ಒಂದು ನಿಗಮ ಸ್ಥಾಪಿಸುವ ಬಗ್ಗೆ ಚಿಂತಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ 'ಜೈ ಹಿಂದ್ ಸಭಾ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ. ಕರ್ನಾಟಕ ಸರ್ಕಾರವು ಮಾಜಿ ಯೋಧರು ಮತ್ತು ಅವರ ಕುಟುಂಬಗಳಿಗೆ ಶಕ್ತಿ ನೀಡಲು ಸದಾ ಸಿದ್ಧವಿದೆ ಎಂದು ಹೇಳಿದರು.
ನೂರಾರು ಮಾಜಿ ಯೋಧರು ಮತ್ತು ಹುತಾತ್ಮರ ಕುಟುಂಬಗಳೊಂದಿಗೆ ಈ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಸುದೈವ. ಕಾಂಗ್ರೆಸ್ ಪಕ್ಷವು ಯಾವಾಗಲೂ ದೇಶ ಮತ್ತು ಸಶಸ್ತ್ರ ಪಡೆಗಳ ಜೊತೆ ನಿಲ್ಲುತ್ತದೆ. ಅದಕ್ಕಾಗಿಯೇ ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ ಎಂದು ನಾನು ಹೇಳುತ್ತಿರುತ್ತೇನೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa