ಕುಷ್ಟಗಿ, 28 ಮೇ (ಹಿ.ಸ.) :
ಆ್ಯಂಕರ್ : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಇ-ಖಾತಾ ನೀಡುವ ಅಭಿಯಾನದ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕುಷ್ಟಗಿ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ನೀಡಲು ಮೇ 10 ರವರೆಗೆ ಅಭಿಯಾನ ನಡೆಸಲಾಗಿದ್ದು, ಈ ದಿನಾಂಕದವರೆಗೆ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲು ಸಾದ್ಯವಾಗದ ಕಾರಣ ಮತ್ತು ಇ-ಖಾತಾ ನೀಡಲು ಬಾಕಿಯಿರುವದರಿಂದ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ರವರು ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಇ-ಖಾತಾ ನೀಡುವ ಅಭಿಯಾನದ ಅವಧಿಯನ್ನು ಆಗಸ್ಟ್ 10ರವರೆಗೆ ವಿಸ್ತರಿಸಿ ಅನುಮೊದನೆ ನೀಡಿದ್ದಾರೆ.
ಕುಷ್ಟಗಿ ಪಟ್ಟಣದ ಸಾರ್ವಜನಿಕರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಕುಷ್ಟಗಿ ಪುರಸಭೆ ಕಾರ್ಯಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್