ಮಾಹಿತಿ ಹಕ್ಕು : ಮೇ 31ರಂದು ಕೊಪ್ಪಳ ವಿವಿ ಕಾರ್ಯಾಗಾರ
ಕೊಪ್ಪಳ, 28 ಮೇ (ಹಿ.ಸ.) : ಆ್ಯಂಕರ್ : ಕೊಪ್ಪಳ ವಿಶ್ವ ವಿದ್ಯಾಲಯದ ವತಿಯಿಂದ ಮಾಹಿತಿ ಹಕ್ಕು ಅಧಿನಿಯಮ - 2005ರ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮೇ 31 ರಂದು ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕ
ಮಾಹಿತಿ ಹಕ್ಕು : ಮೇ 31ರಂದು ಕೊಪ್ಪಳ ವಿವಿ ಕಾರ್ಯಾಗಾರ


ಕೊಪ್ಪಳ, 28 ಮೇ (ಹಿ.ಸ.) :

ಆ್ಯಂಕರ್ : ಕೊಪ್ಪಳ ವಿಶ್ವ ವಿದ್ಯಾಲಯದ ವತಿಯಿಂದ ಮಾಹಿತಿ ಹಕ್ಕು ಅಧಿನಿಯಮ - 2005ರ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮೇ 31 ರಂದು ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಉದ್ಘಾಟನೆ ನೇರವೇರಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ಡಾ.ಹರೀಶ್ ಕುಮಾರ್, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ರಾಜಶೇಖರ್ ಎಸ್., ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ., ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ಮಮತಾ ಬಿ.ಆರ್ ಅವರು ಪಾಲ್ಗೊಳ್ಳುವರು.

ಕಾರ್ಯಾಗಾರದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಸಚಿವರಾದ ಪ್ರೊ.ಕೆ.ವಿ.ಪ್ರಸಾದ್, ವಿವಿಯ ಹಣಕಾಸು ಅಧಿಕಾರಿ ಅಮೀನಸಾಬ ಅತ್ತಾರ, ಗಂಗಾವತಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಮುಮ್ತಾಜ್ ಬೇಗಂ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಕೆ.ಎಚ್.ಛತ್ರದ, ಕೊಪ್ಪಳ ವಿಶ್ವ ವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಹಾಗೂ ಸಿಂಡಿಕೇಟ್ ಹಾಗೂ ಆಕಾಡೆಮಿಕ್ ಕೌನ್ಸಿಲ್ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande