ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ಕರಾವಳಿ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಗಂಭೀರ ಆರೋಪ ಮಾಡಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಒಳ್ಳೆಯದಲ್ಲ. ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ನಾವು ಹೋರಾಟ ಮಾಡಿದ್ದೆವು. ಸರ್ಕಾರ ಯಾರನ್ನೋ ಓಲೈಕೆ ಮಾಡುತ್ತಿದ್ದು, ಕಾನೂನು ಕಾಪಾಡುವಲ್ಲಿ ವಿಫಲವಾಗಿದೆ. ಸರ್ಕಾರ ಮತೀಯವಾದಕ್ಕೆ ಪುಷ್ಠಿ ನೀಡುತ್ತಿರುವುದರಿಂದ ಇಂತಹ ಘಟನೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa