ಯಲಬುರ್ಗಾ, 28 ಮೇ (ಹಿ.ಸ.) :
ಆ್ಯಂಕರ್ : ಯಲಬುರ್ಗಾ ತಾಲೂಕಿನ ಯಡೋಣಿ(ಗುನ್ನಾಳ) ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ 2025-26ನೇ ಸಾಲಿಗೆ 1ನೇ ತರಗತಿಗೆ 40 ವಿದ್ಯಾರ್ಥಿಗಳಿಗೆ (ಶೇ.75 ರಷ್ಟು ಪ.ಪಂಗಡ ಮತ್ತು ಶೇ.25 ರಷ್ಟು ಪ.ಜಾತಿ/ಇತರೆ) ಪ್ರವೇಶ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸರಕಾರಿ ವಾಲ್ಮೀಕಿ ಆಶ್ರಮ ಶಾಲೆ, ಯಡೋಣಿ (ಗುನ್ನಾಳ)ದಲ್ಲಿ ಅಥವಾ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಯಲಬುರ್ಗಾ (ತಾಲೂಕು ಪಂಚಾಯತ್ ಹಿಂದುಗಡೆ) ಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ತಂದೆ/ತಾಯಿ ರವರ ಆಧಾರ್ ಕಾರ್ಡ್, ಪಡಿತರ ಚೀಟಿ ದಾಖಲೆಗಳ ಝರಾಕ್ಸ್ ಪ್ರತಿಗಳನ್ನು ದೃಢೀಕರಿಸಿ ಹಾಗೂ ಪಾಸ್ ಪೋರ್ಟ್ ಅಳತೆ ಎರಡು ಭಾವಚಿತ್ರಗಳನ್ನು ಲಗತ್ತಿಸಿ ಜೂನ್ 06 ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಅಥವಾ ಶಾಲೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾಯರು, ಸರಕಾರಿ ವಾಲ್ಮೀಕಿ ಆಶ್ರಮ ಶಾಲೆ ಯಡೋಣಿ(ಗುನ್ನಾಳ) ರವರ ಮೊ.ಸಂ.: 9900674082 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಯಲಬುರ್ಗಾ ರವರ ಮೊ.ಸಂ.: 9480843166 ಗೆ ಸಂಪರ್ಕಿಸಬಹುದು ಎಂದು ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್