6ನೇ ತರಗತಿ ಪ್ರವೇಶಾತಿಗೆ ಜೂನ್ 03, 04ರಂದು ಕೌನ್ಸೆಲಿಂಗ್
ರಾಯಚೂರು, 29 ಮೇ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಾದರಿ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಸಂಬಂಧಿಸಿದಂತೆ ಜೂನ್ 3 ಹಾಗೂ 4ರಂ
6ನೇ ತರಗತಿ ಪ್ರವೇಶಾತಿಗೆ ಜೂನ್ 03, 04ರಂದು ಕೌನ್ಸೆಲಿಂಗ್


ರಾಯಚೂರು, 29 ಮೇ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಾದರಿ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಸಂಬಂಧಿಸಿದಂತೆ ಜೂನ್ 3 ಹಾಗೂ 4ರಂದು ಕೌನ್ಸಲಿಂಗ್ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಭಾಗವಹಿಸುವಂತೆ ಕೋರಲಾಗಿದೆ.

ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರಾಯಚೂರು, ಗಿಲ್ಲೇಸೂಗೂರು, ಮಾನವಿ, ಸಿಂಧನೂರು, ಲಿಂಗಸೂಗೂರು ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಯರಮರಸ್ ಕ್ಯಾಂಪ್ ವಸತಿ ಶಾಲೆ ಮತ್ತು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ ರಾಯಚೂರು ಇಲ್ಲಿಗೆ 6ನೇ ತರಗತಿಯಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ.75 ರಷ್ಟು ಸ್ಥಾನಗಳನ್ನು (ಮುಸ್ಲಿಂ ಶೇ.77, ಕ್ರಿಶ್ಚಿಯನ್ ಶೇ.14, ಜೈನ್ ಶೇ.7, ಸಿಖ್ ಶೇ.2, ಬೌದ್ಧ ಶೇ.2) ಹಾಗೂ ಶೇ.25ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಮೀಸಲಿರಿಸಿ ಏ.27ರಂದು ಪ್ರವೇಶ ಪರೀಕ್ಷೆ ನಡೆಸಿದ್ದು, ಮೇ.27ರಂದು ಪ್ರವೇಶ ಪರೀಕ್ಷೆಯ ಫಲಿತಾಂಶ ಮತ್ತು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.

ಜೂನ್ 03ರಂದು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಗರದ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಾಗೂ ಜೂನ್ 04ರಂದು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರ. ವಿದ್ಯಾರ್ಥಿಯ 5ನೇ ತರಗತಿಯ ಅಂಕಪಟ್ಟಿ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿಶೇಷ ಮೀಸಲಾತಿ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಸಂಬಂಧಿಸಿದ ಪ್ರಮಾಣ ಪತ್ರದೊಂದಿಗೆ ಭಾಗವಹಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande