ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 29 ಮೇ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್‍ಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 29 ಮೇ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್‍ಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ದಿನಾಂಕ: 01-07-2025 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿಯಲ್ಲಿ 22, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) ನಲ್ಲಿ 12, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) ಯಲ್ಲಿ 03 ಹಾಗೂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) ನಲ್ಲಿ 02 ಸೀಟುಗಳು ಸೇರಿದಂತೆ ಒಟ್ಟು 39 ಸೀಟುಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸೆಲಿಂಗ್‍ಗಾಗಿ ಕರೆಯಲಾಗುವುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ದೂರವಾಣಿ ಸಂ: 08372-259664, ಮೊಬೈಲ್ ಸಂಖ್ಯೆ: 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಬಹುದು.

ಅರ್ಜಿಗಳನ್ನು https://khtigadag.ac.in/AdmissionForm.pdf ಮೂಲಕ ಆನ್‍ಲೈನ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು, ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಜೂನ್ 15 ರೊಳಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande