ಧಾರವಾಡ, 29 ಮೇ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿಗೆ ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮತ್ತು ಮೌಲಾನಾ ಆಜಾದ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್ 01, 2025 ರಂದು ಬೆಳಿಗ್ಗೆ 11 ಘಂಟೆಯಿಂದ ಮಧ್ಯಾಹ್ನ 1 ಘಂಟೆಯವರೆಗೆ ಪ್ರವೇಶ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಜಿಲ್ಲಾ ಕಚೇರಿಯಲ್ಲಿ ಮೇ 30, 2025 ಹಾಗೂ ಮೇ 31, 2025 ರಂದು ಪಡೆದುಕೊಳ್ಳಬೇಕು.
ಹುಬ್ಬಳ್ಳಿ ಅಂಚಟಗೇರಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಹುಬ್ಬಳ್ಳಿ ಅಂಚಟಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ.02 ರಲ್ಲಿ ಪರೀಕ್ಷೆ ನಡೆಸಲಾಗುವುದು. ಪರೀಕ್ಷಾ ಅಭ್ಯರ್ಥಿಗಳು ಜೂನ್ 01, 2025 ರಂದು ಬೆಳಿಗ್ಗೆ 10 ಘಂಟೆಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa