ಜೂನ್ 01ಕ್ಕೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಕಲಬುರಗಿ, 29 ಮೇ (ಹಿ.ಸ.) ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ 603 ನೇ ಜಯಂತ್ಯೋತ್ಸವ ಹಾಗೂ ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭವು ಜೂನ್ 1 ರಂದು ಬೆಳಿಗ್ಗೆ 11 ಕ್ಕೆ ನಗರದ ಖೂಬಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರಾದ ಡಾ.ಶರಬಸವಪ್ಪ ಕಾ
ಜೂನ್ 01ಕ್ಕೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ


ಕಲಬುರಗಿ, 29 ಮೇ (ಹಿ.ಸ.)

ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ 603 ನೇ ಜಯಂತ್ಯೋತ್ಸವ ಹಾಗೂ ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭವು ಜೂನ್ 1 ರಂದು ಬೆಳಿಗ್ಗೆ 11 ಕ್ಕೆ ನಗರದ ಖೂಬಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರಾದ ಡಾ.ಶರಬಸವಪ್ಪ ಕಾಮರೆಡ್ಡಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹರಿಹರ ಎರೆಹೊಸಳ್ಳಿಯ ರೆಡ್ಡಿ ಗುರುಪೀಠದ ಪೂಜ್ಯ ಶ್ರೀ ವೇಮನಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಹೆಡಗಿಮದ್ರಾ ಪೂಜ್ಯ ಶ್ರೀ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯರು ಸಮಾರಂಭದ ನೇತೃತ್ವ ವಹಿಸುವರು. ಸಣ್ಣ ಕೈಹಾರಿಕೆ ಮತ್ತು ಸಾರ್ವಜನಿಕ ಉದ್ಯಮ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಯಾದಗಿರಿ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಗುರುಮಠಕಲ್ ಶಾಸಕರಾದ ಶರಣಗೌಡ ಕಂದಕೂರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹಿರಿಯ ಸಾಹಿತಿ ಪ್ರಮೀಳಾ ಜಾನಪ್ಪಗೌಡ ಅವರು ವಿಶೇಷ ಉಪನ್ಯಾಸ ನೀಡುವರು. ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರಾದ ಡಾ.ಶರಣಬಸವಪ್ಪ ಬಿ.ಕಾಮರೆಡ್ಡಿ ಅವರು ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವರು. ಈ ಸಮಾರಂಭದ ಅಧ್ಯಕ್ಷತೆಯನ್ನು ರೆಡ್ಡಿ ಸಮಾಜದ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಪ್ರೊ.ಚೆನ್ನಾರೆಡ್ಡಿ ಪಾಟೀಲ ವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ರೆಡ್ಡಿ ಸಮಾಜದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande