14 Jun 2025, 5:11 HRS IST

ಹೊಸಪೇಟೆ ತೋಟಗಾರಿಕೆ ರೈತರಿಗೆ ಸಹಾಯ ಧನ : ಅರ್ಜಿ ಅಹ್ವಾನ
ಹೊಸಪೇಟೆ, 29 ಮೇ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಕೂಡ್ಲಿಗಿ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ), ಮತ್ತು ಯೋಜನೆಗಳಡಿಯಲ್ಲಿ ಅರ್ಹ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾ
ಹೊಸಪೇಟೆ ತೋಟಗಾರಿಕೆ ರೈತರಿಗೆ ಸಹಾಯ ಧನ : ಅರ್ಜಿ ಅಹ್ವಾನ


ಹೊಸಪೇಟೆ, 29 ಮೇ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಕೂಡ್ಲಿಗಿ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ), ಮತ್ತು ಯೋಜನೆಗಳಡಿಯಲ್ಲಿ ಅರ್ಹ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಅಂಗಾಂಶ ಬಾಳೆ, ದಾಳಿಂಬೆ, ಪಪ್ಪಯಾ, ಡ್ರಾಗನ್ ಹಣ್ಣು ಪ್ರದೇಶ ವಿಸ್ತರಣೆ, ತೋಟಗಾರಿಕೆ ಬೆಳೆಗಳಲ್ಲಿ ಪ್ಲಾಸ್ಟಿಕ್ ಹೊದಿಕೆ, ಕೊಲ್ಡ್ ಸ್ಟೊರೆಜ್, ಮಿನಿ ಟ್ರಾಕ್ಟರ್(20 ಹೆಚ್‍ಪಿ ಒಳಗೆ) ಮತ್ತು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಶೇ.90 ಸಹಾಯ ಧನ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ದಾಳಿಂಬೆ, ಡ್ರಾಗನ್ ಹಣ್ಣು ಪ್ರದೇಶ ವಿಸ್ತರಣೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬಹು ವಾರ್ಷಿಕ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ದಾಳಿಂಬೆ, ಸೀಬೆ, ತೆಂಗು, ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ, ಗುಲಾಬಿ ಈ ಯೋಜನೆಗಳಿಗೆ ಕೂಡಲೇ ತೋಟಗಾರಿಕೆ ಇಲಾಖೆ ಕೂಡ್ಲಿಗಿ ಸಂಪರ್ಕಿಸಿ ಅರ್ಜಿ ಸಲ್ಲಿಸಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ಹೋಬಳಿಯ ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಕೂಡ್ಲಿಗಿ, ಹೊಸಹಳ್ಳಿ, ಗುಡೇಕೋಟೆ, ಕೊಟ್ಟೂರು ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕರು ಕೂಡ್ಲಿಗಿ, ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರು(ಜಿ.ಪಂ) ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಕೂಡ್ಲಿಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande