ಕೊಪ್ಪಳ, 29 ಮೇ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿರುವ ಆಸ್ತಿ ಮಾಲೀಕರು ನಿವೇಶನವನ್ನು ಸ್ವಚ್ಛಗೊಳಿಸುವಂತೆ ಸೂಚಿಸಲಾಗಿದೆ.
ನಿವೇಶನ ಸ್ವಚ್ಛಗೊಳಿಸಲು 15 ದಿನಗಳ ಗಡುವು ನೀಡಲಾಗಿದ್ದು, ನಿಗದಿತ ಅವಧಿಯಲ್ಲಿ ಸ್ವಚ್ಛಗೊಳಿಸದೇ ಇದ್ದಲ್ಲಿ ನಗರಸಭೆ ಕಾರ್ಯಾಲಯದಿಂದಲೇ ಸ್ವಚ್ಛಗೊಳಿಸಿ ಅದಕ್ಕೆ ತಗುಲುವ ವೆಚ್ಚವನ್ನು ನಿವೇಶನದ ಮೇಲೆ ದಂಡದೊಂದಿಗೆ ಬೋಜಾ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್