ಸಂಡೂರು : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ, 29 ಮೇ (ಹಿ.ಸ.) : ಆ್ಯಂಕರ್ : ಸಂಡೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26 ನೇ ಸಾಲಿಗೆ (ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್
ಸಂಡೂರು : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ, 29 ಮೇ (ಹಿ.ಸ.) :

ಆ್ಯಂಕರ್ : ಸಂಡೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26 ನೇ ಸಾಲಿಗೆ (ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಂಡೂರು ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ವೆಬ್‍ಸೈಟ್ http://bcwd.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಡೂರು ಪಟ್ಟಣದ ವಾಲ್ಮೀಕಿ ವತ್ತದ ತಾಲ್ಲೂಕು ಹಿಂದುಳಿದ ವರ್ಗಗಳ ಕಾರ್ಯಾಲಯ ಅಥವಾ ದೂ.08395-295180 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೀರಭದ್ರಯ್ಯ ಹಿರೇಮಠ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande