ಕಲಬುರಗಿ, 29 ಮೇ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಕ್ಕೆ ಹೊಲಿಕೆ ಮಾಡಿದ ಎನ್. ರವಿಕುಮಾರ್ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಸಿಡಿದ್ದೆದ್ದಿದ್ದು, ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ ಮಹಿಳಾ ಕಾಂಗ್ರೆಸ್ ಘಟಕದಿಂದ ನಗರದ ಕಾಂಗ್ರೆಸ್ ಕಚೇರಿಯಿಂದ ಜಗತ್ ವೃತ್ತದವರೆಗೂ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು, ಎಮ್ ಎಲ್ಸಿ ರವಿಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಲಬುರಗಿ ಜಿಲ್ಲಾಧಿಕಾರಿ ಭಾರತದವರೋ ಅಥವಾ ಪಾಕಿಸ್ತಾನದಿಂದ ಬಂದವರೋ ಅಂತಾ ಹೇಳಿಕೆ ನೀಡಿದ್ದ ಎನ್ ರವಿಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Samarth biral