ಬಿವಿಎ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಹೊಸಪೇಟೆ, 30 ಮೇ (ಹಿ.ಸ.) : ಆ್ಯಂಕರ್ : 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜುಯಲ್ ಆಟ್ರ್ಸ್ ಪದವಿ ಪ್ರವೇಶಾತಿಗಾಗಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಅರ್ಹ ವಿದ್
ಬಿವಿಎ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ


ಹೊಸಪೇಟೆ, 30 ಮೇ (ಹಿ.ಸ.) :

ಆ್ಯಂಕರ್ : 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜುಯಲ್ ಆಟ್ರ್ಸ್ ಪದವಿ ಪ್ರವೇಶಾತಿಗಾಗಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ಡೀನ್ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಅಂತರ್ಜಾಲ http://uucms.karnataka.gov.in ಅಥವಾ http://www.cavamysore.karnataka.gov.in ಮೂಲಕ ಜೂ.10 ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ. ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯಲಯದ ಸಹಾಯವಾಣಿ ಸಂಖ್ಯೆ 08212438931 ಗೆ ಸಂಪರ್ಕಿಸಲು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande