ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 30 ಮೇ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪ್ರಥಮ ವರ್ಷದ ಪದವಿ ಮಟ್ಟ
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 30 ಮೇ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳು ಸ್ಟೇಟ್ ಹಾಸ್ಟೆಲ್ ಪೋರ್ಟಲ್ https://shp.karnataka.gov.in/ ನಲ್ಲಿ ಜೂನ್ 28 ರೊಳಗೆ ಆನ್‍ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ಸಲ್ಲಿಸಬೇಕು.

ಕುಷ್ಟಗಿಯ ಶಾಖಾಪುರ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಕೊಪ್ಪಳದ ಆರೋಗ್ಯ ಬಡಾವಣೆ, ಹೇಮರೆಡ್ಡಿ ಮಲ್ಲಮ್ಮನಗುಡಿ ಹತ್ತಿರ ಕೊಪ್ಪಳ-01 ಹಾಗೂ ಕೊಪ್ಪಳ-02, ವಿಜಯನಗರ ಬಡಾವಣೆ, ಬಿಲಾಲ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಹಾಗೂ ಗಣೇಶ ತೆಗ್ಗು, ಕೊಪ್ಪಳ-1, ಕೊಪ್ಪಳ-2 ಮತ್ತು ಕೊಪ್ಪಳ-3 ನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು. ವಸತಿ ನಿಲಯಗಳಲ್ಲಿ ಶೇ.75 ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳು, ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ.ಗಳಿಗಿಂತ ಮೀರಿರಬಾರದು. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 01 ಲಕ್ಷ ರೂ. ಮೀರಿರಬಾರದು.

ಅರ್ಜಿಯೊಂದಿಗೆ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್, ಹಿಂದಿನ ತರಗತಿಯ ಅಂಕಪಟ್ಟಿ ಹಾಗೂ ವಿದ್ಯಾರ್ಥಿಯ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳು ಹಾಗೂ ಕಾಲೇಜು ಪ್ರವೇಶದ ಶುಲ್ಕ ಪ್ರತಿಯೊಂದಿಗೆ ನಿಗದಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಅಜಾದ್ ಭವನ, ಕೊಪ್ಪಳ, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕುಷ್ಟಗಿ ಹಾಗೂ ಹತ್ತಿರದ ವಸತಿ ನಿಲಯಗಳಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande