ರಾಯಚೂರು, 30 ಮೇ (ಹಿ.ಸ.) :
ಆ್ಯಂಕರ್ : ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಪದವಿ ಪೂರ್ವ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯಗಳು ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ ವಿಳಾಸ: https://sw.kar.nic.in ನಲ್ಲಿ ಆಗಸ್ಟ್ 31ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗೂ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ ರಾಯಚೂರುರವರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ರಾಯಚೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್