ಹೊಸಪೇಟೆ, 30 ಮೇ (ಹಿ.ಸ.) :
ಆ್ಯಂಕರ್ : ಹೊಸಪೇಟೆ ವಿಭಾಗದ 2025-26 ನೇ ಸಾಲಿನ ವಿದ್ಯಾರ್ಥಿಗಳ ಉಚಿತ, ರಿಯಾಯಿತಿ ಬಸ್‍ಪಾಸುಗಳನ್ನು ಸೇವಾಸಿಂಧು ತಂತ್ರಾಂಶದ ಮೂಲಕ ಸಂಪೂರ್ಣ ಗಣಕೀಕೃತವಾಗಿ ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ ಅವರು ತಿಳಿಸಿದ್ದಾರೆ
ವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಮತ್ತು ಹರಪನಹಳ್ಳಿ ಘಟಕಗಳಿಂದ ಪಾಸು ವಿತರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಹೊಸಪೇಟೆ ನಗರದ ಬಸ್ ನಿಲ್ದಾಣ ಸೇರಿದಂತೆ ಆಯಾ ತಾಲೂಕಿನ ವಿದ್ಯಾರ್ಥಿಗಳು ಸ್ಥಳೀಯ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್